Latest News

Happenings & Events

ಶಿರಸಿ ಮತ್ತು ಕುಮಟಾದಲ್ಲಿ ಹೊಸ ಎರಡು ಇಎಸ್‌ಐ ಚಿಕಿತ್ಸಾಲಯ

ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಉತ್ತರ ಕನ್ನಡ ಜಿಲ್ಲೆಗೆ ಇಎಸ್ಐ ಆಸ್ಪತ್ರೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಕಾರ್ಮಿಕ ಸಚಿವರಲ್ಲಿ ವಿನಂತಿಸಿದ್ದರು. ಅದರಂತೆ ಶಿರಸಿ ಮತ್ತು ಕುಮಟಾದಲ್ಲಿ ಹೊಸ ಎರಡು ಇಎಸ್‌ಐ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ತಾತ್ವಿಕವಾಗಿ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ರವರು ಸಂಸದರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಈ ಯೋಜನೆಯನ್ನು ಜಿಲ್ಲೆಗೆ ಮಂಜೂರು ಮಾಡಿಸಿದ ಕೇಂದ್ರ ಕಾರ್ಮಿಕ ಸಚಿವರಿಗೂ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ ಮುಖ್ಯಮಂತ್ರಿಗಳಿಗೂ, ರಾಜ್ಯ ಸರಕಾರದ ಕಾರ್ಮಿಕ ಸಚಿವರಿಗೂ ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಧನ್ಯವಾದಗಳನ್ನು ತಿಳಿಸಿದರು.

#ಅನಂತಕುಮಾರಹೆಗಡೆ

Related posts