Latest News

Happenings & Events

ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‍ನಲ್ಲಿ ಸಂಭವಿಸಿದ ಭೂಕುಸಿತ ಪ್ರದೇಶವನ್ನು ಶ್ರೀ ಅನಂತಕುಮಾರ ಹೆಗಡೆಯವರು ಪರಿಶೀಲನೆ ನಡೆಸಿದರು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‍ನಲ್ಲಿ ಸಂಭವಿಸಿದ ಭೂಕುಸಿತ ಪ್ರದೇಶವನ್ನು ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸದರು  ಶಿಡ್ಲಾಗುಂಡಿ ಸೇತುವೆ ಹಾಗು ಹುಲಗೋಡನ ಆಶ್ರಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸೌಕರ್ಯ ವ್ಯವಸ್ಥೆಯನ್ನು ಪರಿಶೀಲಿಸಿ, ಅಲ್ಲಿನ ಅಧಿಕಾರಿಗಳಿಗೆ ಸೂಕ್ತ ಮುಂಜಾಗೃತಾ ವ್ಯವಸ್ಥೆಯನ್ನು  ಕಲ್ಪಿಸಿ, ಹೆಚ್ಚಿನ ಅವಘಡಗಳಿಗೆ ಸೂಕ್ತ ತಯಾರಿ ಮಾಡಿ ಕೊಂಡಿರುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ತಹಶೀಲ್ದಾರರು, ಬಿಜೆಪಿ ತಾಲೂಕು ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಹಂಡ್ರಮನೆ ಹಾಗೂ ಮುಖಂಡರಾದ ಶ್ರೀ ಪ್ರಸಾದ ಹೆಗಡೆ ಹಾಜರಿದ್ದರು.

#ಅನಂತಕುಮಾರಹೆಗಡೆ_ಕಾರ್ಯಾಲಯ

Related posts