Latest News

Happenings & Events

ಉತ್ತರ ಕನ್ನಡ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಕಡಲ ಅಭಿವೃದ್ಧಿ, ಬೃಹತ್ ಸರಕು ಸಾಗಣೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ

ಉತ್ತರ ಕನ್ನಡ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಕಡಲ ಅಭಿವೃದ್ಧಿ, ಬೃಹತ್ ಸರಕು ಸಾಗಣೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ೦೪ ಬೃಹತ್ ಯೋಜನೆಗಳ ಕುರಿತಂತೆ ಸಮಗ್ರ ಕಾರ್ಯಸಾಧ್ಯತಾ ವರದಿಗಳನ್ನು (DFR) ಸಾಗರಮಾಲಾ ಸೆಲ್ ಮತ್ತು ಸಾಗರಮಾಲಾ ಅಭಿವೃದ್ಧಿ ಕಂಪನಿ ಲಿಮಿಟೆಡ್ (SDCL) ಗೆ ಸಲ್ಲಿಸಲಾಗಿದೆ. ಇನ್ನೂ ಎರಡು ಅಭಿವೃದ್ಧಿ ಯೋಜನೆಗಳಿಗಾಗಿ ಸಮಗ್ರ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು.

ಈ ಯೋಜನೆಗಳು ಕಾರವಾರ ಬಂದರುಗಳಲ್ಲಿ ಅಗತ್ಯ ಸಲಕರಣೆಗಳನ್ನು ಸ್ಥಾಪಿಸುವುದು, ಕಾರವಾರ ಬಂದರಿನ ಯಾಂತ್ರೀಕರಣ, ಸೀಪ್ಲೇನ್ ಸೌಲಭ್ಯಗಳು ಮತ್ತು ಜಲಮಾರ್ಗ ಅಭಿವೃದ್ಧಿಯಂತಹ ಘಟಕಗಳಗೆ ಮಾತ್ರ ಸೀಮಿತವಾಗಿರದೇ, ಆರ್ಥಿಕ ನೆರವಿನ ಕುರಿತ ಒಪ್ಪಂದಗಳನ್ನು ಒಳಗೊಂಡಿರಿವಂತಹ ಪ್ರಸ್ತಾವನೆಗಳನ್ನು ಸಾಗರಮಾಲಾ ಸೆಲ್‌ಗೆ ಸಲ್ಲಿಸಲಾಗಿದೆ. 

ಬಂದರುಗಳು, ಹಡಗು ಮತ್ತು ಜಲಮಾರ್ಗಗಳು, ಸ್ಥಳೀಯ ಜನಸಂಖ್ಯೆ ಹಾಗೂ ಸರಿಸುಮಾರು 30 ಲಕ್ಷ ಪ್ರವಾಸಿಗರನ್ನು ಸಂಪರ್ಕಿಸುವ ಜೊತೆಗೆ ಸಾರಿಗೆ ಮತ್ತು ಬೃಹತ್ ಸರಕು ಸಾಗಾಣಿಕೆ ಅಗತ್ಯತೆಗಳನ್ನು ಪೂರೈಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.  ಇದಲ್ಲದೆ, ಅಭಿವೃದ್ಧಿಪಡಿಸಿದ ಸೌಲಭ್ಯಗಳು ಪಶ್ಚಿಮ ಕರಾವಳಿಯಲ್ಲಿ ಕಡಲ ಕಾರ್ಯಾಚರಣೆಗಳಿಗೆ ಪ್ರಮುಖ  ಭೂಮಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಆ ಮೂಲಕ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. 

ಆದ್ದರಿಂದ, ಭಾರತದ ಸಾಗರ ವಲಯವನ್ನು ಬಲಪಡಿಸುವ ಗೌರವಾನ್ವಿತ ಪ್ರಧಾನ ಮಂತ್ರಿಯವರ ದೂರದೃಷ್ಟಿ ಯೋಜನೆಗಳಿಗೆ ಅನುಮೋದನೆ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವರಾದ ಶ್ರೀ ಸರ್ಬಾನಂದ ಸೋನವಾಲ ರವರಿಗೆ ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಪತ್ರ ಮುಖೇನ ವಿನಂತಿಸಿರುತ್ತಾರೆ.

#ಅನಂತಕುಮಾರಹೆಗಡೆ_ಕಾರ್ಯಾಲಯ

Related posts