Home / Media / Digital News

Digital News

ಟ್ವಿಟ್ಟರ್ ನಿಯಮ ಉಲ್ಲಂಘನೆ: ಅನಂತಕುಮಾರ್ ಹೆಗಡೆ ಖಾತೆ ಲಾಕ್

ಕಾರವಾರ, ಏಪ್ರಿಲ್ 26: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರ ಟ್ವಿಟರ್ ಖಾತೆಯನ್ನು ಲಾಕ್ ಮಾಡಲಾಗಿದೆ. ಈ ಬಗ್ಗೆ ಅನಂತಕುಮಾರ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟ್ಟರ್, "ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ' ಎಂದು ಗಮನಕ್ಕೆ ತಂದಿದೆ. ನಿಮ್ಮ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಸೂಚಿಸಿದೆ. ಏಪ್ರಿಲ್ 8 ರಿಂದ ತಬ್ಲಿಘಿ ಜಮಾತ್ ನ ವಿರುದ್ಧ ಅನಂತಕುಮಾರ ಹೆಗಡೆ ಅವರು ಬರಹಗಳ ಸರಣಿಯನ್ನು ಶುರು ಮಾಡಿದ್ದರು. ಸುಮಾರು ನಾಲ್ಕು ಸುದೀರ್ಘ ಬರಹಗಳನ್ನು ಅವರು ಕೊರೊನಾ ವೈರಸ್ ಎಂಬ ಜಿಹಾದ್ ಅನ್ನು ತಬ್ಲಿಘಿಗಳು ಹರಡುತ್ತಿದ್ದಾರೆ ಎಂಬಿತ್ಯಾದಿ ಅರ್ಥದಲ್ಲಿ ಪ್ರಕಟಿಸಿದ್ದರು. ಇದೇ ಟ್ವೀಟಿನ ನೆಪವಿಟ್ಟುಕೊಂಡು ಟ್ವಿಟ್ಟರ್ ಖಾತೆಯನ್ನು ರದ್ದು ಮಾಡಿರುವುದಾಗಿ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ಭಾರತ ವಿರೋಧಿ ಟ್ವಿಟರ್ ತಮ್ಮ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡುತ್ತಿದ್ದಂತೆ ಸಂಸದ ಅನಂತಕುಮಾರ ಹೆಗಡೆ ಟ್ವಿಟ್ಟರ್ ವಿರುದ್ಧ ಕಿಡಿಕಾರಿದ್ದಾರೆ. "ಟ್ವಿಟ್ಟರ್ ಭಾರತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಭಾರತದ ವಿರುದ್ಧ ಷಡ್ಯಂತ್ರ ಹಾಗೂ ಭಾರತವನ್ನು ಒಡೆಯುವ ಟ್ವೀಟ್ ಗಳನ್ನು ಪ್ರಚಾರಮಾಡುವ ಉದ್ಯಮವನ್ನು ಟ್ವಿಟ್ಟರ್ ಮಾಡುತ್ತಿದೆ' ಎಂದು ಆರೋಪಿಸಿದ್ದಾರೆ.

ಟ್ವಿಟ್ಟರಿಗೆ ಹಣಪಾವತಿಸಿ ಜಾಹೀರಾತು "ಕೆಲವು ದಿನಗಳ ಹಿಂದೆ ಗುರುಪಟವಂತ ಸಿಂಘ್ ಪನ್ನೂನ್ ಎಂಬ ಟ್ವಿಟ್ಟರ್ ಖಾತೆಯಿಂದ ಪಂಜಾಬ್ ರಾಜ್ಯವನ್ನು ಭಾರತದಿಂದ ಸ್ವಾತಂತ್ರಗೊಳಿಸಿ, ಖಲಿಸ್ಥಾನ ಎಂಬ ಪ್ರತ್ಯೇಕ ರಾಷ್ಟ್ರವನ್ನಾಗಿಸುವುದರ ಬಗ್ಗೆ ಟ್ವೀಟ್ ಮಾಡಿದ್ದು, ಅದನ್ನು ಟ್ವಿಟ್ಟರಿಗೆ ಹಣಪಾವತಿಸಿ ಜಾಹೀರಾತು ನೀಡಿದ್ದಾರೆ. ಇದು ಭಾರತದ ವಿರುದ್ಧ ನಡೆಸುತ್ತಿರುವ ಜಾಹೀರಾತಾಗಿದ್ದು, ಇದನ್ನು ಟ್ವಿಟ್ಟರ್ ಅನುಮೋದಿಸಿ ಜಾಹೀರಾತನ್ನು ಪ್ರಚುರ ಪಡೆಸಿದೆ.

ಪ್ರಧಾನಿ, ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ ಇಂತಹ ರಾಷ್ಟ್ರವಿರೋಧಿ ಚಟುವಟಿಕೆಯನ್ನು ಬಯಲು ಮಾಡಿ, ಪ್ರಧಾನಿ ಹಾಗೂ ಗೃಹ ಸಚಿವರ ಗಮನಕ್ಕೆ ನಾನು ತಂದಿದ್ದರ ಪರಿಣಾಮವಾಗಿ, ಏಪ್ರಿಲ್ 22 ರಂದು ತಬ್ಲಿಘಿ ಜಮಾತ್ ನ ವಿರುದ್ಧ ನಾನು ಮಾಡಿರುವ ಟ್ವೀಟಿನ ನೆಪವಿಟ್ಟುಕೊಂಡು ನನ್ನ ಟ್ವಿಟ್ಟರ್ ಅಕೌಂಟ್ ನ್ನು ರದ್ದು ಮಾಡಿದ್ದಾರೆ. ಬದಲಾಗಿ, ನಾನು ಮಾಡಿರುವ ಟ್ವೀಟನ್ನು ತಗೆದುಹಾಕಿದಲ್ಲಿ ನನ್ನ ಅಕೌಂಟ್ ಅನ್ನು ಪುನಃ ಸಕ್ರಿಯಗೊಳಿಸುವುದಾಗಿ ಹೇಳಿದ್ದಾರೆ' ಎಂದು ಅವರು ತಿಳಿಸಿದ್ದಾರೆ.

ನನಗೆ ದೇಶ ಮುಖ್ಯ ದೇಶದ ವಿರುದ್ಧ ನಡೆಯುವ ಯಾವುದೇ ನಡೆಯನ್ನು ಅದು ಯಾರೇ ಇರಲಿ, ನನ್ನ ವಿರೋಧವನ್ನು ನಾನು ವ್ಯಕ್ತಪಡಿಸುತ್ತಾ ಬಂದಿದ್ದೇನೆ. ಇದರಲ್ಲಿ ಯಾವುದೇ ರಾಜೀ ಇಲ್ಲಾ. ಈ ನಿಟ್ಟಿನಲ್ಲಿ ನಾನು ಮಾಡಿರುವ ಟ್ವೀಟನ್ನು ನಾನು ಅಳಿಸುವ ಪ್ರಶ್ನೆಯೇ ಇಲ್ಲ. ಅದರಲ್ಲಿ ಟ್ವಿಟ್ಟರ್ ನಡೆಸುತ್ತಿರುವ ಭಾರತ ವಿರೋಧಿ ಪ್ರಚಾರಗಳನ್ನು ನಾನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ದೇಶ ವಿರೋಧಿ ಸಾಮಾಜಿಕ ಜಾಲತಾಣದ ಅಕೌಂಟಿಗಿಂತ ನನ್ನ ದೇಶ, ನನ್ನ ಸಿದ್ಧಾಂತ, ಜೀವನದ ಆದ್ಯತೆ' ಎಂದು ಅವರು ಹೇಳಿದ್ದಾರೆ. ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಟ್ವಿಟರ್ ನಲ್ಲಿ 74,300 ಫಾಲೊವರ್ಸ್ ಗಳಿದ್ದರು. 2016 ರಿಂದ ಅವರು ಟ್ವಿಟ್ಟರ್ ನಲ್ಲಿ ಸಕ್ರಿಯರಾಗಿದ್ದರು.

Read more at: https://kannada.oneindia.com/news/karwar/twitter-violation-of-rule-anantkumar-hegde-account-locked/articlecontent-pf154710-190344.html

Related posts